CUSTOM SEARCH

ಮಾಹಿತಿ ಹಕ್ಕು ಅಧಿಕಾರಿಗಳು ಮರೆಯುತ್ತಿರುವ ಕಾನೂನಿನ ಮರು ನೆನಪಿಗೆ

ಮಾಹಿತಿ ಹಕ್ಕು ಅಧಿನಿಯಮ ೨೦೦೫
(ಆಯ್ದ ಬಾಗಗಳ ಯಥಾವತ್ತು)

೪. ಸಾರ್ವಜನಿಕ ಪ್ರಾಧಿಕಾರಗಳ ಹೊಣೆಗಾರಿಕೆ.-
(೧) ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು,-
(ಎ) ಈ ಅಧಿನಿಯಮದ ಅಡಿಯಲ್ಲಿ ಮಾಹಿತಿ ಹಕ್ಕಿಗಾಗಿ ಅನುಕೂಲ ಮಾಡಿಕೊಡುವ ರೀತಿಯಲ್ಲಿ ಮತ್ತು ನಮೂನೆಯಲ್ಲಿ ಕ್ರಮಬದ್ಧ ಸೂಚಿಪಟ್ಟಿ ಮತ್ತು ಸೂಚೀಕರಣಗೊಂಡ ಅದರ ಎಲ್ಲಾ ದಾಖಲೆಗಳನ್ನು ನಿರ್ವಹಿಸತಕ್ಕದ್ದು ಮತ್ತು ಸೂಕ್ತ ಸಮಯದೊಳಗಾಗಿ ಮತ್ತು ಸಂಪನ್ಮೂಲಗಳ ಲಭ್ಯತೆಗೊಳಪಟ್ಟು, ಗಣಕೀಕರಣಕ್ಕೆ ಸೂಕ್ತವಾದ ಎಲ್ಲ ದಾಖಲೆಗಳನ್ನು ಗಣಕೀಕರಿಸುವಂತೆ ಮತ್ತು ಅಂತಹ ದಾಖಲೆಗಳು ಸುಲಭವಾಗಿ ದೊರೆಯುವಂತೆ ದೇಶಾದ್ಯಂತ ವಿವಿಧ ಸಿಸ್ಟಂಗಳಲ್ಲಿ ಸಂಪರ್ಕಜಾಲದ ಮೂಲಕ ಸಂಪರ್ಕ ಕಲ್ಪಿಸುವಂತೆ ಮಾಡತಕ್ಕದ್ದು;
(ಬಿ) ಈ ಅಧಿನಿಯಮವನ್ನು ಅಧಿನಿಯಮಿತಿಗೊಳಿಸಿದ ದಿನಾಂಕದಿಂದ ಒಂದುನೂರ ಇಪ್ಪತ್ತು ದಿನಗಳೊಳಗಾಗಿ,- (I) .. .. .. ..
(II).. .. .. .. ..
(III) .. .. .. .. ....
(xi) ಎಲ್ಲ ಯೋಜನೆಗಳ ವಿವರಗಳನ್ನು ಸೂಚಿಸುವ, ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿ; ಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದ ಆಯವ್ಯಯವನ್ನು,
(xii) ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡು, ಸಹಾಯಧನ ಕಾರ್‍ಯಕ್ರಮಗಳ ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್‍ಯಕ್ರಮಗಳ ಫಲಾನುಭವಿಗಳ ವಿವರಗಳನ್ನು;
(xiii) ಅದು ನೀಡಿರುವ ರಿಯಾಯಿತಿಗಳನ್ನು, ಅನುಮತಿ ಪತ್ರಗಳನ್ನು ಅಥವಾ ಅಧಿಕಾರಪತ್ರಗಳನ್ನು ಪಡೆಯುವವರ ವಿವರಗಳನ್ನು;.. .. .. .. .... .. .. .. ..

(ಸಿ) ಸಾರ್ವಜನಿಕರಿಗೆ ಸಂಬಂಧಿಸಿದ ಪ್ರಮುಖ ಕಾರ್‍ಯನೀತಿಗಳನ್ನು ರೂಪಿಸುವಾಗ ಅಥವಾ ನಿರ್ಧಾರಗಳನ್ನು ಘೋಷಿಸುವಾಗ ಎಲ್ಲ ಸುಸಂಗತ ಸಂಗತಿಗಳನ್ನು ಪ್ರಕಟಿಸತಕ್ಕದ್ದು;

(ಡಿ) ಆಡಳಿತಾತ್ಮಕ ಅಥವಾ ಅರೆನ್ಯಾಯಿಕ ಸ್ವರೂಪದ ನಿರ್ಣಯಗಳಿಂದ ಬಾಧಿತರಾದ ವ್ಯಕ್ತಿಗಳಿಗೆ ಅದರ ಕಾರಣಗಳನ್ನು ಒದಗಿಸತಕ್ಕದ್ದು.

(೨) ಮಾಹಿತಿ ಪಡೆಯುವುದಕ್ಕಾಗಿ, ಈ ಅಧಿನಿಯಮದ ಉಪಯೋಗವನ್ನು ಕನಿಷ್ಠ ಪ್ರಮಾಣದಲ್ಲಿ ಅವಲಂಬಿಸುವುದಕ್ಕಾಗಿ ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು ಅಂತರ್ಜಾಲವೂ ಸೇರಿದಂತೆ, ಅಂಥ ಮಾಹಿತಿಯನ್ನು ವಿವಿಧ ಸಂಪರ್ಕ ಸಾಧನಗಳ ಮೂಲಕ ನಿಯಮಿತ ಮಧ್ಯಂತರದಲ್ಲಿ (೧)ನೇ ಉಪ ಪ್ರಕರಣದಲ್ಲಿ (ಬಿ) ಖಂಡದ ಅಗತ್ಯಗಳಿಗನುಸಾರವಾಗಿ ಸಾರ್ವಜನಿಕರಿಗೆ ಸಾಕಷ್ಟು ಮಾಹಿತಿ ದೊರಕಿಸಿಕೊಡಲು ಕ್ರಮ ತೆಗೆದುಕೊಳ್ಳುವುದು ಅದರ ನಿರಂತರ ಪ್ರಯತ್ನವಾಗಿರತಕ್ಕದ್ದು.

(೩) (೧)ನೇ ಉಪ ಪ್ರಕರಣದ ಉದ್ದೇಶಗಳಿಗಾಗಿ ಪ್ರತಿಯೊಂದು ಮಾಹಿತಿಯನ್ನು, ಸಾರ್ವಜನಿಕರಿಗೆ ಸುಲಭವಾಗಿ ದೊರೆಯುವಂತಹ ನಮೂನೆಯಲ್ಲಿ ಮತ್ತು ವಿಧಾನದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡತಕ್ಕದ್ದು.

(೪) ವೆಚ್ಚದ ಪ್ರಮಾಣವನ್ನು, ಸ್ಥಳೀಯ ಭಾಷೆಯನ್ನು ಮತ್ತು ಆ ಸ್ಥಳೀಯ ಪ್ರದೇಶದಲ್ಲಿನ ಸಂಪರ್ಕದ ಅತ್ಯಂತ ಪರಿಣಾಮಕಾರಿ ವಿಧಾನ ಇವುಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲ ವಿಷಯಗಳನ್ನು ಪ್ರಸಾರ ಮಾಡತಕ್ಕದ್ದು ಮತ್ತು ಆ ಮಾಹಿತಿಯು, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯ ಅಥವಾ ಸಂದರ್ಭಾನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯ ಬಳಿ ಸಾಧ್ಯವಾದಷ್ಟು ಮಟ್ಟಿಗೆ ವಿದ್ಯುನ್ಮಾನ ನಮೂನೆಯಲ್ಲಿ ಸುಲಭವಾಗಿ, ಉಚಿತವಾಗಿ ಅಥವಾ ನಿಗದಿಪಡಿಸಬಹುದಾದಂತಹ ಮಾಧ್ಯಮ ವೆಚ್ಚದ ಅಥವಾ ಮುದ್ರಣಕ್ಕೆ ತಗಲುವ ವೆಚ್ಚದ ಬೆಲೆಯಲ್ಲಿ ಲಭ್ಯವಾಗುವಂತಿರತಕ್ಕದ್ದು.

೭. ಕೋರಿಕೆಯ ವಿಲೆ.- (೧) ೫ನೇ ಪ್ರಕರಣದ (೨)ನೇ ಉಪ ಪ್ರಕರಣದ ಪರಂತುಕಕ್ಕೆ ಅಥವಾ ೬ನೇ ಪ್ರಕರಣದ (೩)ನೇ ಉಪ ಪ್ರಕರಣದ ಪರಂತುಕಕ್ಕೆ ಒಳಪಟ್ಟು, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಥವಾ ಸಂದರ್ಭಾನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ೬ನೇ ಪ್ರಕರಣದ ಅಡಿಯಲ್ಲಿ ಕೋರಿಕೆಯನ್ನು ಸ್ವೀಕರಿಸಿದ ನಂತರ ತ್ವರಿತವಾಗಿ ಮತ್ತು ಯಾವುದೇ ಸಂದರ್ಭದಲ್ಲಿ ಕೋರಿಕೆ ಸ್ವೀಕರಿಸಿದ ಮೂವತ್ತು ದಿವಸಗಳೊಳಗಾಗಿ, ನಿಗದಿಪಡಿಸಬಹುದಾದಂತಹ ಶುಲ್ಕವನ್ನು ಸಂದಾಯ ಮಾಡಿದ ಮೇಲೆ ಮಾಹಿತಿ ಒದಗಿಸತಕ್ಕದ್ದು ಅಥವಾ ೮ ಮತ್ತು ೯ನೇ ಪ್ರಕರಣಗಳಲ್ಲಿ ನಿರ್ದಿಷ್ಠಪಡಿಸಿರುವ ಯಾವುವೇ ಕಾರಣಗಳಿಗಾಗಿ ಕೋರಿಕೆಯನ್ನು ತಿರಸ್ಕರಿಸತಕ್ಕದ್ದು: ಆದರೆ, ಕೋರಿರುವ.. .. .. .. .. .. .. ..

(೩) ಮಾಹಿತಿ ಒದಗಿಸುವುದಕ್ಕೆ ಆಗುವ ವೆಚ್ಚವನ್ನು ಸೂಚಿಸುವ ಯಾವುದೇ ಹೆಚ್ಚಿನ ಶುಲ್ಕವನ್ನು ಸಂದಾಯ ಮಾಡಿದ ಮೇಲೆ ಮಾಹಿತಿ ಒದಗಿಸಬೇಕೆಂಬ ತೀರ್ಮಾನ ತೆಗೆದುಕೊಂಡಿದ್ದಲ್ಲಿ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಥವಾ ಸಂದರ್ಭಾನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ಕೋರಿಕೆ ಸಲ್ಲಿಸಿರುವ ವ್ಯಕ್ತಿಗೆ ಈ ಮುಂದಿನ ವಿವರಗಳನ್ನು ತಿಳಿಸತಕ್ಕದ್ದು,-
(ಎ) (೧)ನೇ ಉಪ ಪ್ರಕರಣದ ಅಡಿಯಲ್ಲಿ ನಿಗದಿಪಡಿಸಿರುವ ಶುಲ್ಕದ ಮೊಬಲಗನ್ನು ನಿರ್ಧರಿಸಲು ಮಾಡಿದ ಲೆಕ್ಕಾಚಾರದೊಂದಿಗೆ ಅವನು ನಿರ್ಧರಿಸಿರುವಂತೆ ಮಾಹಿತಿ ಒದಗಿಸಲು ತಗಲುವ ವೆಚ್ಚವನ್ನು ಸೂಚಿಸುವ ಹೆಚ್ಚಿನ ಶುಲ್ಕದ ವಿವರಗಳು, ಶುಲ್ಕವನ್ನು ಠೇವಣಿ ಇಡುವಂತೆ ಅವನನ್ನು ಕೋರುವುದು ಮತ್ತು ಸದರಿ ಮಾಹಿತಿಯ ರವಾನೆ ಮತ್ತು ಶುಲ್ಕ ಸಂದಾಯದ ನಡುವಿನ ಅವಧಿಯನ್ನು ಆ ಉಪ ಪ್ರಕರಣದಲ್ಲಿ ಉಲ್ಲೇಖಿಸಿರುವ ಮೂವತ್ತು ದಿವಸಗಳ ಅವಧಿಯನ್ನು ಲೆಕ್ಕ ಹಾಕುವ ಉದ್ದೇಶಕ್ಕಾಗಿ ಗಣನೆಗೆ ತೆಗೆದುಕೊಳ್ಳತಕ್ಕದ್ದಲ್ಲ;.. .. .. .. .. .. ..

(೬) (೫)ನೇ ಉಪ ಪ್ರಕರಣದಲ್ಲಿ ಏನೇ ಇದ್ದರೂ ಸಾರ್ವಜನಿಕ ಪ್ರಾಧಿಕಾರವು (೧)ನೇ ಉಪ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ಕಾಲಮಿತಿಗಳನ್ನು ಪಾಲಿಸಲು ವಿಫಲವಾದಲ್ಲಿ ಮಾಹಿತಿಗಾಗಿ ಕೋರಿಕೆ ಸಲ್ಲಿಸುವ ವ್ಯಕ್ತಿಗೆ ಮಾಹಿತಿಯನ್ನು, ಶುಲ್ಕವಿಲ್ಲದೆ ಒದಗಿಸತಕ್ಕದ್ದು.

No comments:

CASE LAW ON LAND LAWS

KARNATAKA LAND LAWS